ಉಡುಪಿ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ಹೆಗ್ಡೆ ಅವರಿಗೆ ತೌಳುವ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ

ತುಳುನಾಡ ರಕ್ಷಣಾ ವೇದಿಕೆ ರಿ., ತುಳುನಾಡ ಸೂರ್ಯ ಪತ್ರಿಕೆವತಿಯಿಂದ ಸಹಕಾರ ಸಪ್ತಾಹ-2025 ರ ಅಂಗವಾಗಿ ಸಹಕಾರಿ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದ ಉಡುಪಿ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯಲ್ಲಿ ಪ್ರಸ್ತುತ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ರಾಜೇಶ್ ಹೆಗ್ಡೆ ಯವರಿಗೆ ತೌಳುವ ಸಹಕಾರಿ ರತ್ನಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಜಗದ್ಗುರು ಸ್ವಸ್ತಿ ಶೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜೈನ ಮಠ ಮೂಡುಬಿದ್ರೆ(ಆಶೀರ್ವಚನ), ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ […]