ಮಂಗಳೂರು: ಎಲ್ಲೆಡೆ ಭಯಂಕರ ಹಿಂಸಾಚಾರ, ಶುಕ್ರವಾರ ನಗರದೆಲ್ಲೆಡೆ ನಿಷೇಧಾಜ್ಞೆ ಜಾರಿ

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ಏಕಾಏಕಿ ಹಿಂಸಾಚಾರ ನಡೆದಿದ್ದು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮಂಗಳೂರಿನಲ್ಲಿ ಇಂದಿನಿಂದ ಡಿಸೆಂಬರ್ 20 ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಇದರ ಮಧ್ಯೆ ಉದ್ರಿಕ್ತ ಗುಂಪು ಜಿಲ್ಲಾಧಿಕಾರಿ ಕಚೇರಿಗೆ ಘೋಷಣೆ ಕೂಗುತ್ತಾ ಬಂದಿದೆ. ಪೊಲೀಸರು ಪ್ರತಿಭಟನೆ ನಡೆಸದಂತೆ ಎಚ್ಚರಿಕೆ ನೀಡಿದರೂ ಉದ್ರಿಕ್ತ ಗುಂಪು ಕಲ್ಲು ಬಿಸಾಡುತ್ತಾ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಉದ್ರಿಕ್ತರನ್ನು ನಿಯಂತ್ರಣಕ್ಕೆ ತರಲು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದರು. ಹಲವರಿಗೆ ಗಾಯಗಳಾಗಿದ್ದು […]