ಸಿಮೆಂಟ್ ಬ್ಯಾಗ್ ತುಂಬಿದ ಲಾರಿ‌ ಪಲ್ಟಿ, ವಾಹನ ಸಂಚಾರಕ್ಕೆ ಅಡ್ಡಿ

ಮಂಗಳೂರು: ಸಿಮೆಂಟ್ ಬ್ಯಾಗ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ  ಸಮೀಪದ ನೆಕ್ಕರೆ ಬಳಿ ಸಂಭವಿಸಿದೆ.ಘಟನೆಯಲ್ಲಿ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ರಸ್ತೆ ಮಧ್ಯೆಯೇ ಲಾರಿ ಪಲ್ಟಿಯಾದ ಕಾರಣ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಅಲ್ಲದೇ ಲಾರಿ ತೆರವು ಕಾರ್ಯಚರಣೆಯು  ವಿಳಂಬವಾಗುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ಕಡಬ ಮೂಲಕ ಬದಲಿ ವ್ಯವಸ್ಥೆ ಮಾಡಲಾಯಿತು. ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ತೆರವು ಕಾರ್ಯಚರಣೆ ನಡೆಸಲಾಯಿತು.