ವಿದೇಶಿ ಪ್ರಜೆಯನ್ನು ಬಿಡದ ಮಂಗನ ಕಾಯಿಲೆ, ಫ್ರಾನ್ಸ್ ಮಹಿಳೆಗೆ ಮಂಗನ ಕಾಯಿಲೆ: ಕೆಎಂಸಿಗೆ ದಾಖಲು

ಉಡುಪಿ: ಮಂಗನ ಕಾಯಿಲೆ ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದು, ಜನರಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿಸುತ್ತಿದೆ. ಈ ಮಧ್ಯೆ ಫ್ರಾನ್ಸ್ ದೇಶದ ಮಹಿಳೆಯೊಬ್ಬರಲ್ಲಿ ಕೆಎಫ್ ಡಿ ವೈರಸ್ ಪತ್ತೆಯಾಗಿದ್ದು, ಇಂದು ಮಂಗನ ಕಾಯಿಲೆ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಫ್ರಾನ್ಸ್ ನಿಂದ ಬಂದಿರುವ 33ರ ಹರೆಯದ ಈ ಮಹಿಳೆ ತನ್ನ ಗಂಡನೊಂದಿಗೆ ಉತ್ತರ ಕನ್ನಡ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.  ಧಾರ್ಮಿಕ ಕ್ಷೇತ್ರದ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಬಂದಿದ್ದ ಆಕೆ ಬಳಿಕ ಅಲ್ಲಿಂದ ಉತ್ತರ […]