ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮರಕ್ಕೆ ಡಿಕ್ಕಿ: ಓರ್ವ ಮೃತ್ಯು.
ಮಂಗಳೂರು: ಕೊಣಾಜೆಯ ಪುಳಿಂಚಾಡಿ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ಮರಕ್ಕೆ ಢಿಕ್ಕಿ ಹೊಡೆದು ಓರ್ವ ಸಾವನಪ್ಪಿ, ಇಬ್ಬರು ಗಾಯಗೊಂಡ ಘಟನೆ ನ. 24 ರಂದು ಭಾನುವಾರ ಸಂಜೆ ನಡೆದಿದೆ. ಮೃತರು ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃತರು ಎಂದು ಗುರುತಿಸಲಾಗಿದೆ. ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ರಿಕ್ಷಾದಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ಢಿಕ್ಕಿ ಹೊಡೆದಿದೆ.ಈ […]