ಮಂಗಳೂರು: ಭೀಕರ ರಸ್ತೆ ಅಪಘಾತ; NSUI ಜಿಲ್ಲಾ ಉಪಾಧ್ಯಕ್ಷ ಸಹಿತ ಇಬ್ಬರು ಮೃತ್ಯು –ಇಬ್ಬರು ಗಂಭೀರ ಗಾಯ

ಮಂಗಳೂರು: ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.ನಡುರಾತ್ರಿ 2.30ರ ವೇಳೆಗೆ ಘಟನೆ ನಡೆದಿದೆ. ರಾ.ಹೆ. 66ರ ಜಪ್ಪಿನಮೊಗರು ದಕ್ಷಿಣ ಸಂಚಾರಿ […]