ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ; ಸಹಸವಾರೆ ಸ್ಥಳದಲ್ಲಿ ಮೃತ್ಯು!

ಮಂಗಳೂರು: ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಬಸ್ ಸ್ಕೂಟರ್ ಸಹಸವಾರೆಯ ಮೇಲೆಯೇ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರು ವೃತ್ತದ ಬಳಿ ಬುಧವಾರ ರಾತ್ರಿ 7.45ರ ಸುಮಾರಿಗೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಎಂಬಾಕೆ ಮೃತಪಟ್ಟ ಯುವತಿ. ಈಕೆ ಕಿಶೋರ್(32) ಎಂಬವರೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ಇವರಿದ್ದ […]