ಮಂಗಳೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಪ್ರೀತಿಸುವ ನಾಟಕವಾಡಿ ಅತ್ಯಾಚಾರ: ಯುವಕನ‌ ಬಂಧನ

ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ:ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ […]