ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ; ಶಾಸಕ ವೇದವ್ಯಾಸ ಕಾಮತ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು.

ಮಂಗಳೂರು: ‘ಇಲ್ಲಿಯ ಪದವು ಶಕ್ತಿನಗರದ ಶ್ರೀಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಸಮಾರಂಭದ ವೇಳೆ ಶಾಸಕ ವೇದವ್ಯಾಸ್‌ ಕಾಮತ್‌ ಅವರು ನಿಂದಿಸಿದ್ದನ್ನು ಆಕ್ಷೇಪಿಸಿದ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಶಾಸಕ ವೇದವ್ಯಾಸ್‌ ಕಾಮತ್‌ ಕುಮ್ಮಕ್ಕು ನೀಡಿದ್ದಾರೆ’ ಎಂದು ಜಿಲ್ಲಾ ಕಾಂಗ್ರೆಸ್‌ ಸದಸ್ಯ ಯಶವಂತ ಪ್ರಭು ದೂರು ನೀಡಿದ್ದಾರೆ. ಶಾಸಕ ಕಾಮತ್‌ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಯಶವಂತ ಪ್ರಭು ಇತರರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರ ಮಣಿ […]