ಮಂಗಳೂರು: ಡ್ರಗ್ಸ್ ಮಾರಾಟ ಆರೋಪ; 8 ಮಂದಿ ವಿದ್ಯಾರ್ಥಿಗಳ ಬಂಧನ.

ಮಂಗಳೂರು: ನಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಎಂಟು ಮಂದಿ ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ರಾಹುಲ್, ಸಂಗೀತ್ ಕೃಷ್ಣ, ಸೂರಜ್, ಸಂಜಯ್, ಅಶ್ವಂತ್, ಅಬ್ದುಲ್ ಜಬ್ಬಾರ್ , ರಿಚರ್ಡ್, ಅನುರಾಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ನಗರದ ಬಂದರ್ ದಕ್ಕೆಯಲ್ಲಿ ಎಂಡಿಎಂಎ ಮಾರಾಟದಲ್ಲಿ ನಿರತರಾಗಿದ್ದಾಗ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ನಗರದ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, […]