ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಖುಲಾಸೆ.
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ 23-06-2023 ರಂದು ಆರೋಪಿ ಶಾಶ್ವತ್ ಬಾಲಕಿಯನ್ನು ಹುಟ್ಟುಹಬ್ಬದ ನೆಪದಲ್ಲಿ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಾಗೇಶ್ ಪ್ರಕರಣದ ತನಿಖೆ ನಡೆಸಿ ಆರೋಪಿ […]