ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರಿ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್
ಮಂಗಳೂರು: ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ನೀಡಿದ್ದು, ಜುಲೈ 15 ಮತ್ತು 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ , ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಜುಲೈ 14ರಂದು ಆರೆಂಜ್ ಅಲರ್ಟ್ ಹಾಗೂ ಚಾಮರಾಜನಗರ, ಹಾಸನ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಜುಲೈ 15ರಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗೆ ರೆಡ್ ಹಾಗೂ ಕೊಡಗು, ಹಾಸನ […]