ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯ ಬೇಕು: ರೋಹನ್ ಮೊಂತೇರೊ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯಬೇಕು ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದು ರೋಹನ್ ಕಾರ್ಪೋರೇಷನ್‌ನ ಸ್ಥಾಪಕ ಮತ್ತು ಅಧ್ಯಕ್ಷ ರೋಹನ್ ಮೊಂತೇರೊ ತಿಳಿಸಿದ್ದಾರೆ. ಅವರು ಗುರುವಾರ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು. ಮಂಗಳೂರು ನಗರ ಇನ್ನಷ್ಟು ಬೆಳೆಯಲು ಬೇಕಾದ ನೈಸರ್ಗಿಕ ಸೌಲಭ್ಯ ವನ್ನು ಹೊಂದಿದೆ.ಮಂಗಳೂರು ಜಲ, ವಾಯು, ನೆಲ ಸಾರಿಗೆ ಸಂಪರ್ಕ ಹೊಂದಿರುವ ನಗರ.ಹೆಚ್ಚು ಸುಶಿಕ್ಷಿತ […]