ಮಂಗಳೂರು: ಅಸೌಖ್ಯದಿಂದ ಬಾಣಂತಿ ಮೃತ್ಯು.
ಕಡಬ: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎರಡು ತಿಂಗಳ ಬಾಣಂತಿ ಅಸೌಖ್ಯದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಭವಿಸಿದೆ. ಮೃತರು ಕಡಬ ತಾಲೂಕು ಆಲಂಕಾರು ಗ್ರಾಮದ ದಯಾನಂದ ಗೌಡರ ಪತ್ನಿ ಪುಷ್ಪಾವತಿ (34). ಅವರು ಎರಡು ತಿಂಗಳ ಹಿಂದೆ ನಾಲ್ಕನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.ತಾಯಿ ಮಗು ಆರೋಗ್ಯವಾಗಿದ್ದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು. ಕೆಲವು ದಿನಗಳ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ […]