ಜ.17ರಿಂದ 23ರವರೆಗೆ ಉಡುಪಿ-ಮಂಗಳೂರಿನಲ್ಲಿ “ಕರ್ನಾಟಕ ಕ್ರೀಡಾಕೂಟ-2025”

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ಜಿಲ್ಲಾಡಳಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಜ.17ರಿಂದ 23ರವರೆಗೆ ಉಡುಪಿ ಹಾಗೂ ಮಂಗಳೂರಿನಲ್ಲಿ ಕರ್ನಾಟಕ ಕ್ರೀಡಾಕೂಟ-2025 ಅನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟದಲ್ಲಿ 25ವಿವಿಧ ಕ್ರೀಡಾ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, 3247 ಸ್ಪರ್ಧಾಳುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ […]