ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆ.

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹವನ್ನು ಕೂಡಲೇ ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.ಭಾನುವಾರ ಬೆಳಿಗ್ಗೆ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು.ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ […]