ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ; ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ, ಆರೋಪಿಗಳ ಪತ್ತೆಗೆ ಖಡಕ್ ಸೂಚನೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನ ಕೋಟೆಕಾರ್ ಸಹಕಾರಿ ಬ್ಯಾಂಕ್’ಗೆ ಶುಕ್ರವಾರ (ಜ.17) ಮಧ್ಯಾಹ್ನ ಹಾಡಹಗಲೇ ಬ್ಯಾಂಕ್ ಗೆ ನುಗ್ಗಿದ ಖದೀಮರ ಗುಂಪು ಹತ್ತು ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ […]