ಮಂಗಳೂರು: ಕೊಟ್ಟಾರಚೌಕಿ ಬಳಿ ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ತೀರ್ಪು
ಮಂಗಳೂರು: ಕೊಟ್ಟಾರಚೌಕಿ ಬಳಿ ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ ನೀಡುವಂತೆ ವಿಮಾ ಕಂಪೆನಿಗೆ ಆದೇಶಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ತೀರ್ಪು ನೀಡಿದ್ದಾರೆ. ಪಣಂಬೂರಿನ ಎಂಸಿಎಫ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹೇಶ್ ಭಟ್ 2018ರ ಮೇ 18ರಂದು ತನ್ನ ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಕೊಟ್ಟಾರಚೌಕಿ ಬಳಿ ರಾಜಸ್ಥಾನ ನೋಂದಣಿಯ ಲಾರಿ ಢಿಕ್ಕಿ ಹೊಡೆದು ಮೃತಪಟ್ಟಿದ್ದರು.ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ಜಡ್ಜ್ ನ್ಯಾಯಾಲಯದಲ್ಲಿ ಮೋಟಾರು ವಾಹನ ಅಪಘಾತ […]