ಕೆಎಸ್ಸಾರ್ಟಿಸಿ ವತಿಯಿಂದ ದಸರಾ ಪ್ರಯುಕ್ತ ಮಂಗಳೂರು ನವದುರ್ಗ ದರ್ಶನ ವಿಶೇಷ ಪ್ಯಾಕೇಜ್.
ಮಂಗಳೂರು: ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು ಮಡಿಕೇರಿ, ಮಂಗಳೂರು- ಕೊಲ್ಲೂರು, ಮಂಗಳೂರು- ಮುರುಡೇಶ್ವರಕ್ಕೆ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ 12ರವರೆಗೆ ಯೋಜಿಸಲಾಗಿದೆ. ನವದುರ್ಗ ದರ್ಶನ:ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ – ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ- ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ- ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಸಸಿಹಿಷ್ಣು ಶ್ರೀ ಭಗವತಿ […]