ಮಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತ ವರ್ತನೆ: ಯುವಕನ ಶರ್ಟ್‌ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಮಹಿಳೆ.

ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನೋರ್ವನ ಬಟ್ಟೆ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ಬೆಳಗ್ಗೆ ನಗರದ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ನಡೆದಿದೆ. ಶಬರಿ ಎನ್ನುವಾತ ಪೊಲೀಸ್‌ ವಶವಾದವನು. ಯುವತಿಯರು ನಡೆದುಕೊಂಡು ಹೋಗುತ್ತಿದ್ದಾಗ ಈತ ಅನುಚಿತವಾಗಿ ವರ್ತಿಸುತ್ತಿದ್ದ. ಯುವಕನನ್ನು ತರಾಟೆಗೆ ತೆಗೆದುಕೊಂಡ ಯುವತಿಯರು ಬಳಿಕ ಆತನ ಶರ್ಟ್‌ ಬಿಚ್ಚಿಸಿ ಪೊಲೀಸರಿಗೆ ಮಾಹಿತಿ ನೀಡಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಅಲ್ಲದೆ ಆತನ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.