ಮಂಗಳೂರು: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ.
ಮಂಗಳೂರು: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರದಂದು ತೀರ್ಪು ನೀಡಿದ್ದಾರೆ. ಸೂಟರ್‌ಪೇಟೆಯ ಜೋನಸ್ ಸ್ಯಾಮ್ಸನ್ ಆಲಿಯಾಸ್ ಜೋನಸ್ ಜೌಲಿನ್ ಸ್ಯಾಮ್ಸನ್ (35) ಮತ್ತು ವಿಕ್ಟೋರಿಯಾ ಮಥಾಯಿಸ್ (47) ಜೀವಾವಧಿ ಶಿಕ್ಷೆಗೊಳಗಾಗದವರು.ಪ್ರಕರಣದ ಇನೋರ್ವ ಆರೋಪಿ ರಾಜು (34) ಎಂಬಾತನಿಗೆ ಆರೂವರೆ ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ನಗರದ 2019ರ ಮೇ 11ರಂದು […]