ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘನೆ

ಉಡುಪಿ: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಡಿಸಿಪಿಗಳಾದ ಮಿಥುನ್ ಹಾಗೂ ರವಿಶಂಕರ್ ಅವರು ಈಗಾಗಲೆ ಸಂತ್ರಸ್ತೆಗೆ, ಅವರು ಕಳೆದುಕೊಂಡ 17 ಲಕ್ಷ ರೂಪಾಯಿಗಳ ವರ್ಗಾವಣೆಯ ಆದೇಶ ಪತ್ರವನ್ನು […]