ಮಂಗಳೂರು ಮಸಾಜ್ ಪಾರ್ಲರ್ ದಾಳಿ ಪ್ರಕರಣ; ಆರೋಪಿಗಳ ತಕ್ಷಣ ಬಂಧನಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಉಡುಪಿ: ಮಂಗಳೂರಿನ ಮಸಾಜ್ ಪಾರ್ಲರಿಗೆ ದಾಳಿ ಮಾಡಿದವರನ್ನು ತಕ್ಷಣ ಬಂಧಿಸಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ಪಾರ್ಲರ್ ಮೇಲೆ ದಾಳಿಯಾಗಿದೆ ಎಂಬುವುದು ಗೊತ್ತಿಲ್ಲ. ಇಂತಹ ಕೃತ್ಯಗಳು ನಡೆಯಬಾರದು. ಯಾರಿಗೂ ವ್ಯಾಪಾರ ಮಾಡಿಕೊಳ್ಳುವುದಕ್ಕೆ ಅಡ್ಡಿಪಡಿಸಬಾರದು. ಪ್ರತಿಯೊಬ್ಬರಿಗೂ ಕೆಲಸ ಮಾಡಿಕೊಳ್ಳುವ ಹಕ್ಕಿದೆ. ಯಾರು ಕೂಡ ಕಾನೂನು ಕೈಗೆ ಎತ್ತಿಕೊಳ್ಳಬಾರದು ಎಂದರು. ಮಸಾಜ್ ಪಾರ್ಲರ್ ಗೆ ದಾಳಿ ಮಾಡಿದವರು […]