ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ, ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ.

ಮಂಗಳೂರು: ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿ ಸುಧೀರ್(27)ನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ವಿವರ:ಬಾಲಕಿಯು(13) ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಆರೋಪಿ ಸುಧೀರ್‌ನ ಮನೆಗೆ ರಜಾ ದಿನಗಳಲ್ಲಿ ಹಾಗೆಯೇ ಇತರ ದಿನಗಳಲ್ಲಿ ಟಿ.ವಿ. ನೋಡಲು ಹೋಗುತ್ತಿದ್ದಳು. ಕೆಲವೊಂದು ಬಾರಿ ಸುಧೀರ್ ಮಾತ್ರ ಮನೆಯಲ್ಲಿರುತ್ತಿದ್ದು, […]