ನಂತೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಸಿಟಿ ಬಸ್; ಅಪಾಯದಿಂದ ಪಾರಾದ ಪ್ರಯಾಣಿಕರು

ಮಂಗಳೂರು: ಸಿಟಿ ಬಸ್ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಗುದ್ದಿದ ಘಟನೆ ನಂತೂರು ಸಮೀಪ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಅಪಾಯ ಉಂಟಾಗಿಲ್ಲ. ವಾಮಂಜೂರು ಕಡೆಯಿಂದ ಬರುತ್ತಿದ್ದ ಸಾಯೀಷ ಹೆಸರಿನ 3 ನಂಬರಿನ ಸಿಟಿ ಬಸ್ ನಂತೂರು ಸಿಗ್ನಲ್ ದಾಟಿ ಮಲ್ಲಿಕಟ್ಟೆ ಕಡೆಗೆ ವೇಗವಾಗಿ ಬರುತ್ತಿತ್ತು. ಬಸ್ ಮುಂಭಾಗ ಸ್ಕೂಲ್ ಬಸ್ ಸಾಗುತ್ತಿದ್ದು, ಹಿಂಭಾಗ ಮತ್ತೊಂದು ಲೋಕಲ್ ಬಸ್ ಸಾಗುತ್ತಿತ್ತು ಎನ್ನಲಾಗಿದೆ. ಇದೇ ವೇಳೆ ಬಸ್‌ನ ಸ್ಟೇರಿಂಗ್ ಲಾಕ್‌ನ ಎಂಡ್ ಕಟ್ ಆಗಿ, ಟೈರ್ ನಿಯಂತ್ರಣ ಕಳೆದುಕೊಂಡು ಚಾಲಕನ ಕೈಯಿಂದ […]