ಮಂಗಳೂರು: ನೇತ್ರಾವತಿ ಸೇತುವೆ ದುರಸ್ತಿ ಕಾಮಗಾರಿ: ಏ.1ರಿಂದ 30ರವರೆಗೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಗಳೂರು: ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ 30-04-2025 ರವರೆಗೆ 30 ದಿನಗಳು ಪ್ರಮುಖ ದುರಸ್ತಿ ಕಾಮಗಾರಿ ನಡೆಯಲಿದೆ. ಹೀಗಾಗಿ ಒಂದು ಸೇತುವೆಯಲ್ಲಿ (ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ) ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್ವೆಲ್ ನಿಂದ ತೊಕ್ಕೊಟ್ಟು ವರೆಗೆ ಸದ್ರಿ ಹೆದ್ದಾರಿಯ ರಸ್ತೆಯಲ್ಲಿ ಸಂಚಾರ ದಟ್ಟಣೆ […]