ಮಂಗಳೂರು: ಪಿಲಿಕುಳ ಕಂಬಳೋತ್ಸವ ಮುಂದೂಡಿಕೆ.

ಮಂಗಳೂರು: ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಜಿಲ್ಲಾಡಳಿತ ವತಿಯಿಂದ ಇದೇ 17ಮತ್ತು 18ರಂದು ಆಯೋಜಿಸಲು ಉದ್ದೇಶಿಸಿದ್ದ ಪಿಲಿಕುಳ ಕಂಬಳೋತ್ಸವವನ್ನು ಗ್ರಾಮ ಪಂಚಾಯಿತಿ ಉಪಚುನಾವಣೆಯ ಕಾರಣಕ್ಕಾಗಿ ಮುಂದೂಡಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯ ಸ್ಥಾನಗಳ ಭರ್ತಿಗೆ ಉಪ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗವು ಘೋಷಿಸಿದೆ. ಈ ಉಪ ಚುನಾವಣಣೆಯ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇದೇ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಮೂಡುಶೆಡ್ಡೆ ಗ್ರಾಮ ಪಂಚಾಯಿತಿ […]