ಮಂಗಳೂರು: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನ; ಮಗ ಮೃತ್ಯು, ತಾಯಿ ಸ್ಥಿತಿ ಗಂಭೀರ

ಮಂಗಳೂರು: ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ತಾಯಿ ಮತ್ತು ಮಗ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮಗ ಸಾವನ್ನಪ್ಪಿ, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ. ಮೃತಪಟ್ಟವರು ನಾಲ್ಕೂರು ಗ್ರಾಮದ ದೇರಪ್ಪಜ್ಜನಮನೆ ನಿವಾಸಿ ಕುಶಾಲಪ್ಪ ಗೌಡ ಅವರ ಮಗ ನಿತಿನ್ (32). ಅವರ ತಾಯಿ ಸುಲೋಚನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತಿನ್ ಅವರು ಐಟಿಐ ಪದವೀಧರರಾಗಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಅವರು ಒಂದು ವರ್ಷದ ಹಿಂದೆ ದೀಕ್ಷಾ […]