ಮಂಗಳೂರು: ಭೀಕರ ರಸ್ತೆ ಅಪಘಾತ; ಕಾಲೇಜು ವಿದ್ಯಾರ್ಥಿ ಮೃತ್ಯು.

ಮಂಗಳೂರು: ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂಎಸ್‌ಡಬ್ಲ್ಯು ವಿದ್ಯಾರ್ಥಿಯೊಬ್ಬ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರು ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಮುಂಡೂರು ನಿವಾಸಿ ಶೇಖರ ಆಚಾರ್ಯರ ಪುತ್ರರಾದ ಪ್ರವಿತ್ ಆಚಾರ್ಯ(21) ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಎಸ್‌ಡಬ್ಲ್ಯು ವಿದ್ಯಾರ್ಥಿ. ಕಾಲೇಜು ವ್ಯಾಸಂಗದ ಉದ್ದೇಶದಿಂದ ಮಂಗಳೂರು ಸಮೀಪ ತನ್ನ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದರು. ಪ್ರವಿತ್ ಆಚಾರ್ಯ ಪಡೀಲ್ ಅಥವಾ ಬಿ.ಸಿ.ರೋಡ್‌ನಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ವಿಟ್ಲಕ್ಕೆ ಕಾಲೇಜಿಗೆ ಹೋಗುತ್ತಿದ್ದರು. ಎಂದಿನಂತೆ […]