ಸೌಜನ್ಯ ಹೆಸರು ಬಳಸಿಕೊಂಡು ನಾವು ಹಣ ಮಾಡಿದ್ದೇವೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ

ಮಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಸೆ.1 ರಂದು ಧರ್ಮಸ್ಥಳದಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ವಿಜಯೇಂದ್ರ ಅವರು ನೇರವಾಗಿ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಮನೆಗೆ ತೆರಳಿದರು. ಅಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು. “ನ್ಯಾಯ ಕೋರಿದ್ದಕ್ಕಾಗಿಯೇ ನಮ್ಮ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ನಿಮ್ಮ ಪಕ್ಷದವರೇ ನಾವು ದೊಡ್ಡ […]