ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ.

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿದ್ದ ಆರೋಪಿ ಶಿಕ್ಷಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ ಎಫ್‌ಟಿಎಸ್‌ಸಿ-1)ವು 5 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮೂಲತಃ ಹತ್ಯಡ್ಕ ಅರಸಿನಮಕ್ಕಿ ಪಡ್ಡಾಯಿಬೆಟ್ಟುವಿನ ಪ್ರಸಕ್ತ ಕಲ್ಲಮುಂಡ್ಕೂರು ನಿವಾಸಿ ಗುರುವ ಮೊಗೇರ ಯಾನೆ ಗುರುವ ಎಂ.ಪಿ. (49) ಶಿಕ್ಷೆಗೊಳಗಾದ ಆರೋಪಿ. ಶಿಕ್ಷಕ ವೃತ್ತಿಯಲ್ಲಿದ್ದ ಆರೋಪಿಯು ರಜೆ ಅಥವಾ ಪಠ್ಯಕ್ಕೆ ಸಂಬಂಧಪಟ್ಟಂತೆ ಏನಾದರೂ ಸಂದೇಹವಿದ್ದರೆ ಶಾಲೆಯಲ್ಲಿರುವ […]