ತ್ರಿಶಾ ಕ್ಲಾಸಸ್ ಮಂಗಳೂರು : ಸಿಎ ಫೌಂಡೇಶನ್ ಮಾಹಿತಿ ಕಾರ್ಯಾಗಾರ

ಮಂಗಳೂರು : ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ‌ಫೌಂಡೇಶನ್ ವಿದ್ಯಾರ್ಥಿಗಳಿಗೆ ಜುಲೈ 5 ರಂದು ಮಂಗಳೂರಿನ ಶ್ರೀ ರಾಮಾಶ್ರಮ ಪಿಯು ಕಾಲೇಜಿನಲ್ಲಿ ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಯಿತು.ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಸಿಎ ಸಂತೋಷ್ ಪ್ರಭು ಅವರು ಸಿಎ ಪರೀಕ್ಷೆ ರಾಷ್ಟ್ರ ಮಟ್ಟದ ಪರೀಕ್ಷೆಯಾಗಿದೆ. ದೇಶ-ವಿದೇಶಗಳಲ್ಲಿಯೂ ಉತ್ತಮ ಉದ್ಯೋಗ ಅವಕಾಶಗಳನ್ನು ಹೊಂದಿದೆ. ತರಗತಿಯ ಮೊದಲ ದಿನದಿಂದಲೇ ಪರೀಕ್ಷಾ ತಯಾರಿಯನ್ನು ನಡೆಸಿದರೆ ಉತ್ತಮ ಶ್ರೇಣಿಯ ಅಂಕಗಳೊಂದಿಗೆ ಉತ್ತೀರ್ಣರಾಗಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. […]