ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಮೃತ್ಯು.

ಮಂಗಳೂರು: ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ತಡಂಬೈಲು ಸುಪ್ರೀಂ ಹಾಲ್ ಜಂಕ್ಷನ್ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉತ್ತರ ಕರ್ನಾಟಕ ಮೂಲದ ಭೀಮಪ್ಪ (40)ಎಂದು ಗುರುತಿಸಲಾಗಿದೆ. ಮೃತ ಭೀಮಪ್ಪ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಉಡುಪಿ ಕಡೆ ನಮ್ಮ ಮಂಗಳೂರು ಕಡೆಗೆ ಹೋಗುತ್ತಿದ್ದ ತಡೆರಹಿತ ಬಸ್‌ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಭೀಮಪ್ಪ ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು […]