ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 37,337 ಮಂದಿ ಅಭ್ಯರ್ಥಿಗಳು – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು: ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,745 ವಿದ್ಯಾರ್ಥಿಗಳು ಮತ್ತು 18592 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 37,337 ಮಂದಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು 15 ಸರಕಾರಿ, 22 ಖಾಸಗಿ ಮತ್ತು 22 ಅನುದಾನರಹಿತ ಖಾಸಗಿ ಕಾಲೇಜುಗಳು ಸೇರಿದಂತೆ 59 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಮಂಗಳೂರು 21, […]