ಕುದ್ರೋಳಿ ಗಣೇಶ್‌ಗೆ “ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ.

ಮಂಗಳೂರು: ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ( ಐ ಎಂ ಎ) ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ ಪ್ರತಿಷ್ಟಿತ ” ಗೋಲ್ಡನ್ ಮ್ಯಾಜಿಷಿಯನ್ ” ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ಸಂದಾಯವಾಗಿದೆ. ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಜಾದೂ ದಿನಾಚರಣೆಯ ನೆನಪಿಗಾಗಿ ನಡೆದ ಅದ್ದೂರಿ ಸಮಾರಂಭದಲ್ಲಿ ವಿಶಾಖಪಟ್ಟಣದ ಲೋಕಸಭಾ ಸದಸ್ಯರಾದ ಶ್ರೀಭರತ್ ಮುತ್ತುಕುಮುಲಿಯವರು ಕುದ್ರೋಳಿ […]