ಯಕ್ಷಾಭಿನಯ ಬಳಗದಿಂದ ಯಕ್ಷಗಾನ ಪ್ರದರ್ಶನ
ಮಂಗಳೂರು: ಮಂಗಳೂರಿನಲ್ಲಿರುವ ಬಡಗು ತಿಟ್ಟು ಯಕ್ಷಗಾನ ಆಸಕ್ತರು ಹುಟ್ಟುಹಾಕಿದ ‘ಯಕ್ಷಾಭಿನಯ ಬಳಗ’ದ ಎರಡನೆಯ ವಾರ್ಷಿಕೋತ್ಸವ ಮತ್ತು ಯಕ್ಷಗಾನ ಪ್ರದರ್ಶನ ವಾರಾಂತ್ಯದ ಲಾಕ್ಡೌನ್ ಕಾರಣದಿಂದ ಮುಂದೂಡಿದ್ದು, ಇದೇ ಬರುವ ಜನವರಿ 13ಕ್ಕೆ ಮಂಗಳೂರಿನ ಪುರಭವನದಲ್ಲಿ ಮರುನಿಗದಿಗೊಂಡಿದೆ. ಅಂದು ಅಪರಾಹ್ನ 2.30 ಕ್ಕೆ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಗುರು ಐರೋಡಿ ಮಂಜುನಾಥ ಕುಲಾಲ್ ನಿರ್ದೇಶನದಲ್ಲಿ ಸಂಸ್ಥೆಯ ಶಿಕ್ಷಣಾರ್ಥಿ ಸದಸ್ಯರಿಂದ ಅಭಿಮನ್ಯು ಕಾಳಗ ಮತ್ತು ಜಾಂಬವತಿ ಕಲ್ಯಾಣ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ರಾಘವೇಂದ್ರ ಆಚಾರ್ಯ ಜನ್ಸಾಲೆ, ಪ್ರಸಾದ್ […]