ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ “ನ್ಯಾಯ ಪತ್ರ” ಬಿಡುಗಡೆ : ಐದು ಅಂಶಗಳ ಪ್ರಣಾಳಿಕೆ; ಕೆಲಸ, ಸಂಪತ್ತು, ಕಲ್ಯಾಣಕ್ಕೆ ಒತ್ತು
ನವದೆಹಲಿ: 2024 ರ ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ (Congress) ಪಕ್ಷವು ಶುಕ್ರವಾರ “ನ್ಯಾಯ ಪತ್ರ” ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ನಾಯಕ ಪಿ ಚಿದಂಬರಂ, ಪ್ರಣಾಳಿಕೆಯ ಮುಖ್ಯ ವಿಷಯವೆಂದರೆ “ನ್ಯಾಯ” ಎಂದರು. ಕಳೆದ 10 ವರ್ಷಗಳಲ್ಲಿ, ವಿಶೇಷವಾಗಿ ಕಳೆದ ಐದು ವರ್ಷಗಳಲ್ಲಿ ನ್ಯಾಯದ ಪ್ರತಿಯೊಂದು ಅಂಶವು ಬೆದರಿಕೆಗೆ ಒಳಗಾಗಿದೆ ಮತ್ತು ದುರ್ಬಲಗೊಂಡಿದೆ ಎಂದು ಅವರು ಹೇಳಿದರು. “ನ್ಯಾಯ ಪತ್ರ” ಪ್ರಣಾಳಿಕೆ ಮೂರು ಪ್ರಬಲ ಪದಗಳನ್ನು ಒಳಗೊಂಡಿದೆ – “ಕೆಲಸ” “ಸಂಪತ್ತು” ಮತ್ತು “ಕಲ್ಯಾಣ”. […]
ಉಡುಪಿ: ಮೀನುಗಾರರ ಸರ್ವೋದಯಕ್ಕಾಗಿ ವಿಶೇಷ ಆದ್ಯತೆ; ಬಿಜೆಪಿ ಪಕ್ಷ ಪ್ರಣಾಳಿಕೆಯಲ್ಲಿ ಘೋಷಣೆ
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಕೇಂದ್ರದಲ್ಲಿ ಬುಧವಾರದಂದು ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು. ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಉಡುಪಿಯನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪದೊಂದಿಗೆ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದೇವೆ. ನಗರದಲ್ಲಿ ಬಹುಮುಖ್ಯವಾಗಿ ಬೇಕಾಗಿರುವ ಬಹುಮಡಿ ಪಾರ್ಕಿಂಗ್ ಸಂಕೀರ್ಣ ನಿರ್ಮಾಣ, ಕಲ್ಸಂಕ ಜಂಕ್ಷನ್ ನಲ್ಲಿ 70 ಮೀಟರ್ ವ್ಯಾಸವುಳ್ಳ ಸಿಗ್ನಲ್ ರಹಿತ ಮಧ್ವಾಚಾರ್ಯ ವೃತ್ತ ನಿರ್ಮಾಣ, ಒಳಚರಂಡಿ ವ್ಯವಸ್ಥೆಯ ಪುನನಿರ್ಮಾಣ, 35 ವಾರ್ಡ್ ನಲ್ಲಿ ವೈಜ್ಞಾನಿಕ […]
ಬಿಜೆಪಿ-ಕಾಂಗ್ರೆಸ್ ಚುನಾವಣಾ ಕದನ ತಾರಕಕ್ಕೆ: ಬಜರಂಗ ದಳ ನಿಷೇಧ ಪ್ರಸ್ತಾಪಕ್ಕೆ ಎಲ್ಲೆಡೆ ಆಕ್ರೋಶ; ಸಾಮಾಜಿಕ ಜಾಲತಾಣದಲ್ಲಿ ಭಜರಂಗಿ ಕ್ಯಾಂಪೇನ್ ವೈರಲ್!
ಬೆಂಗಳೂರು: ಬಿಜೆಪಿ-ಕಾಂಗ್ರೆಸ್ ಮಧ್ಯೆ ಚುನಾವಣಾ ಕದನ ತಾರಕ್ಕೇರಿದ್ದು, ಮಂಗಳವಾರದಂದು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ತನ್ನ ಪ್ರಣಾಳಿಕೆಯಲ್ಲಿ ಪಿ.ಎಫ್.ಐ ಮತ್ತು ಬಜರಂಗದಳವನ್ನು ಸಮೀಕರಿಸಿದ್ದ ಕಾಂಗ್ರೆಸ್ ಈ ಸಂಘಟನೆಗಳಿಗೆ ನಿಷೇಧ ಹೇರುವ ಬಗ್ಗೆ ಘೋಷಣೆ ಮಾಡಿತ್ತು. ಇದರಿಂದ ಆಕ್ರೋಶಗೊಂಡ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದಂತಹ ಹಿಂದೂ ಪರ ಸಂಘಟನೆಗಳು ಕಾಂಗ್ರೆಸ್ ವಿರುದ್ದ ಕಿಡಿಕಾರಿವೆ. ಕಾಂಗ್ರೆಸ್ ನ ಬಜರಂಗದಳ ನಿಷೇಧ ಭರವಸೆಗೆ ಇತ್ತ ಬಿಜೆಪಿ ನಾಯಕರು ಕೂಡಾ ಸಿಡಿದೆದ್ದಿದ್ದಾರೆ. ತಮ್ಮ ಪ್ರೊಫೈಲ್ ಫೋಟೋ, ವಾಟ್ಸಪ್, ಫೇಸ್‌ಬುಕ್ ಸ್ಟೇಟಸ್‌ಗಳಲ್ಲಿ […]