ಮಣಿಪಾಲ: ಕಾಡಿನಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ
ಮಣಿಪಾಲ: ಇಲ್ಲಿನ 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದಲ್ಲಿ ಭಾನುವಾರ ರಾತ್ರಿ ಹಡಿಲು ಗದ್ದೆ ಹಾಗೂ ಮೀಸಲು ಅರಣ್ಯಕ್ಕೆ ಬೆಂಕಿ ಬಿದ್ದಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ರಾಜೀವನಗರದ ಶ್ರೀನಿವಾಸ ಆಚಾರ್ಯ ಎಂಬವರ ಹಡಿಲು ಗದ್ದೆಯಲ್ಲಿ ಇಂದು ಸಂಜೆ 7.30ರ ಸುಮಾರಿಗೆ ಬೆಂಕಿ ಅವಘಡ ಉಂಟಾಗಿದ್ದು, ಅದು ಬಳಿಕ ಸಮೀಪದ ಮೀಸಲು ಅರಣ್ಯಕ್ಕೂ ವ್ಯಾಪಿಸಿದೆ ಎನ್ನಲಾಗಿದೆ. ಬೆಂಕಿ ಅವಘಡದಿಂದ ಗದ್ದೆಯ ಹುಲ್ಲು ಸಂಪೂರ್ಣವಾಗಿ […]