ಕಂಬಳ ಅಭಿಮಾನಿಗಳಿಗೆ ಮತ್ತೊಂದು ಆಘಾತ: ಕಂಬಳ ಕ್ಷೇತ್ರದಲ್ಲಿ ಹಲವು ಪದಕ ಗೆದ್ದಿದ್ದ “ನಾಗು” ಕೋಣ ಇನ್ನಿಲ್ಲ
ಮಣಿಪಾಲ: ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಶನಿವಾರ ಅಸುನೀಗಿದೆ. ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ನಾಗು ಎಂಬ ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ನಾಲ್ಕು ವರ್ಷಗಳ ಹಿಂದೆ ಹಲಗೆ ಸೀನಿಯರ್ ವಿಭಾಗಕ್ಕೆ ಎಂಟ್ರಿ ನೀಡಿದ್ದ ನಾಗು ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು. ಬೈಂದೂರಿನಿಂದ ಎಲ್ಲರೂ ಬಂಢಾರಮನೆ ಸೇರಿದ್ದ […]