ಮಣಿಪಾಲ: ಪಾದಚಾರಿಗೆ ಕಾರು ಡಿಕ್ಕಿ; ಮೂರು ಕಾರುಗಳು ಜಖಂ

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿ ನಿಲ್ಲಿಸಿದ್ದ ಮೂರು ಕಾರುಗಳಿಗೆ ಹಾನಿ ಮಾಡಿರುವ ಘಟನೆ ಮಣಿಪಾಲ ಬಬ್ಬುಸ್ವಾಮಿ‌ ದೈವಸ್ಥಾನದ ಬಳಿ ಇಂದು ಮಧ್ಯಾಹ್ನ ನಡೆದಿದೆ. ಹುಂಡೈ ಗ್ರಾಂಡ್ ಐ10 ಕಾರು ಮಣಿಪಾಲದಿಂದ ಪರ್ಕಳದ ಕಡೆಗೆ ಹೋಗುತ್ತಿದ್ದು, ಮಣಿಪಾಲ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಡಿಕ್ಕಿಯಾಗಿದೆ. ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ […]