ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯ ನರ್ಸಿಂಗ್ ವಿಭಾಗಕ್ಕೆ ಎನ್ಎಬಿಎಚ್ ನಿಂದ ಶ್ರೇಷ್ಠತಾ ಪ್ರಮಾಣಪತ್ರ
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಶುಶ್ರೂಷಾ (ನರ್ಸಿಂಗ್) ವಿಭಾಗಕ್ಕೆ ಶ್ರೇಷ್ಠತಾ (ಎಕ್ಸಲೆನ್ಸ್) ಪ್ರಮಾಣಪತ್ರವು ರಾಷ್ಟ್ರೀಯ ಆಸ್ಪತ್ರೆ ಮತ್ತು ಆರೋಗ್ಯ ಪೂರೈಕದಾರರ ಮಾನ್ಯತೆ ಪಡೆದ ಸಂಘ (ಎನ್ ಎ ಬಿ ಎಚ್), ಭಾರತೀಯ ಗುಣಮಟ್ಟದ ಮಂಡಳಿ (ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ)ಯಿಂದ ದೊರೆತಿದೆ. ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ವಿಭಾಗದ ಮುಖ್ಯಸ್ಥರಾದ ಡಾ. ಶುಭ ಸೂರಿಯ ಅವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. […]