ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕೊರೊನಾ ಶಂಕಿತ ಮಹಿಳೆ ದಾಖಲು
ಮಣಿಪಾಲ: ಇಲ್ಲಿನ ಕೆಎಂಸಿ ಆಸ್ಪತ್ರೆಗೆ ಕೊರೊನಾ ಶಂಕಿತ ಮಹಿಳೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈಚೆಗೆ ಮಕ್ಕಾ ಯಾತ್ರೆಯಿಂದ ಬಂದಿರುವ ಸಾಗರ ಮೂಲದ ಮಹಿಳೆಯೊಬ್ಬರಲ್ಲಿ ಶೀತ, ಕೆಮ್ಮು, ಗಂಟಲು ನೋವು ಹಾಗೂ ಜ್ವರದ ಲಕ್ಷಣ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಜಿಲ್ಲಾ ಆರೋಗ್ಯ ಇಲಾಖೆಯ ಆದೇಶದಂತೆ ಕೆಎಂಸಿ ಆಸ್ಪತ್ರೆಯಲ್ಲಿ ಕೊರೊನಾ ಶಂಕಿತರ ಚಿಕಿತ್ಸೆಗಾಗಿ 20 ವಿಶೇಷ ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ.