ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಹೂಂಡೈ ಇಯಾನ್ ಕಾರೊಂದು ರಸ್ತೆಯ ಪಕ್ಕದ ನಾಮಫಲಕಕ್ಕೆ ಡಿಕ್ಕಿ ಹೊಡೆದು ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ಮಣಿಪಾಲದ ಆದರ್ಶನಗರಕ್ಕೆ ಹೋಗುವ ರಸ್ತೆ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ. ಚಾಲಕ ಮಣಿಪಾಲದಿಂದ ಅಲೆವೂರು ಮಾರ್ಗವಾಗಿ ತೆರಳುತ್ತಿದ್ದು, ಈ ವೇಳೆ ಲೆಕ್ ವಿವ್ಯೂ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಸ್ಥಳೀಯರು ಕೂಡಲೇ ರಕ್ಷಣೆಗೆ ಧಾವಿಸಿದ್ದು, ಮಗುಚಿಬಿದ್ದ ಕಾರಿನೊಳಗಿದ್ದ ಚಾಲಕನನ್ನು ಹೊರಗೆ ತೆಗೆದಿದ್ದಾರೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. […]