ಮಣಿಪಾಲ: ಗಾಂಜಾ ಮಾರಾಟಕ್ಕೆ ಯತ್ನ; ಓರ್ವನ ಬಂಧನ

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭಟ್ಕಳ ಗುಲ್ಜಾರ್ ಸ್ಟ್ರೀಟ್ ನಿವಾಸಿ ಆರೀಬ್ ಅಹಮ್ಮದ್(31) ಬಂಧಿತ ಆರೋಪಿ. ಈತ ಎ.13ರಂದು ಆಂಧ್ರಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ತಾಂಗೋಡೆ 2ನೇ ಕ್ರಾಸ್ ಗೆ ಬಂದಿದ್ದನು. ಇದನ್ನು ಖರೀದಿಸಲು ಅಪರಿಚಿತರು ಬರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, […]