ಮಣಿಪಾಲ ಸುಲಿಗೆ ಪ್ರಕರಣ: ಕಾಪು ಮೂಲದ ಆರೋಪಿಯ ಬಂಧನ

ಉಡುಪಿ: ಮಣಿಪಾಲ ಮತ್ತು ಉಡುಪಿ ಠಾಣಾ ವ್ಯಾಪ್ತಿಯಲ್ಲಿ ಸೆ.19 ಮುಂಜಾನೆ ನಡೆದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿಯನ್ನು ಬಂಧಿಸಲು ಕಾರ್ಯ ತಂತ್ರ ರೂಪಿಸಿದ್ದಾರೆ. ಈ ಬಗ್ಗೆ ಉಡುಪಿ ಎಸ್ಪಿ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾಹಿತಿ ನೀಡಿದರು. ಮಲ್ಲಾರು ಕೊಂಬಗುಡ್ಡೆಯ ಮೊಹಮ್ಮದ್ ಆಶಿಕ್(19) ಬಂಧಿತ ಆರೋಪಿ. ಏನಿದು ಪ್ರಕರಣ.? ಸೆ.19ರಂದು ತಡರಾತ್ರಿ ಮಣಿಪಾಲ ಮತ್ತು ಉಡುಪಿ ಸುತ್ತಮುತ್ತಲಿನ ಭಾಗದಲ್ಲಿ ಬೈಕ್ ನಲ್ಲಿ ಹೋಗುವವರನ್ನು ಅಡ್ಡಗಟ್ಟಿ, […]