ಮಣಿಪಾಲ: ಎಂಟಿಎಲ್ ನಿಂದ ಗೆಟ್ ಮೈ ಕ್ಲಾಸ್ ಪ್ಲಾಟ್ ಫಾರ್ಮ್

ಮಣಿಪಾಲ: ಮಣಿಪಾಲ ಸಮೂಹ ಸಂಸ್ಥೆಯ ಅಂಗ ಸಂಸ್ಥೆಯಾಗಿರುವ ಮಣಿಪಾಲ ಟೆಕ್ನಾಲಜೀಸ್‌ ಲಿಮಿಟೆಡ್‌ (ಎಂಟಿಎಲ್‌) ಜೆಇಇ, ನೀಟ್‌, ಮತ್ತು ಸಿಇಟಿಯಂಥ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳನ್ನು ಎದುರಿಸಲು ಸನ್ನದ್ಧರಾಗುತ್ತಿರುವ ವಿದ್ಯಾರ್ಥಿಗಳ ನೆರವಿಗಾಗಿ ಆನ್‌ಲೈನ್‌ ಪರೀಕ್ಷೆಯ ಸಿದ್ಧತೆಗಾಗಿ GetMiClass (ಗೆಟ್‌ಮೈಕ್ಲಾಸ್‌) ಫ್ಲ್ಯಾಟ್‌ಫಾರ್ಮ್ ಅನ್ನು ಪರಿಚಯಿಸಿದೆ. ಪ್ರಸಕ್ತ ವರ್ಷದ ಪಠ್ಯದ ಪ್ರಶ್ನೆಗಳಲ್ಲದೆ ಈ ಹಿಂದಿನ ವರ್ಷಗಳ ಸಿಇಟಿ, ಜೆಇಇ ಮತ್ತು ನೀಟ್‌ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳ ಆಯ್ದ 2,000ಕ್ಕೂ ಅಧಿಕ ಪ್ರಶ್ನೆಗಳಿಗೆ ತಜ್ಞರು ನೀಡಿದ ಉತ್ತರಗಳನ್ನು ಒಳಗೊಂಡ ವೀಡಿಯೋಗಳನ್ನು ಈ ಫ್ಲ್ಯಾಟ್‌ಫಾರ್ಮ್ ಒಳಗೊಂಡಿದೆ. ಅಷ್ಟು […]