ಮಣಿಪಾಲ ಆರೋಗ್ಯ ಕಾರ್ಡ್-2025 ನೋಂದಣಿ ಆರಂಭ; ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ: ಮೋಹನ್ ಶೆಟ್ಟಿ

ಕುಂದಾಪುರ: ‘ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನಿಂದ (ಮಾಹೆ) ಕರ್ನಾಟಕ, ನೆರೆಯ ರಾಜ್ಯಗಳಲ್ಲಿ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ‘ಮಣಿಪಾಲ ಆರೋಗ್ಯ ಕಾರ್ಡ್ 2025’ರ ನೋಂದಣಿ ಪ್ರಾರಂಭಿಸಿರುವುದಾಗಿ ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಘೋಷಿಸಿದ್ದಾರೆ’ ಎಂದು ಕೆಎಂಸಿ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು. ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ ನೀಡುವ ಧ್ಯೇಯ ಹೊಂದಿದ್ದ ಮಣಿಪಾಲ ಸಂಸ್ಥೆಯ ಸಂಸ್ಥಾಪಕ ಡಾ.ಟಿ.ಎಂ.ಎ.ಪೈ ಅವರ ದೂರದೃಷ್ಟಿ, ಮಾಹೆ […]