ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಿಂದ ಟೆಲಿಮೆಡಿಸಿನ್ ಸೌಲಭ್ಯ 

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು  ಏಪ್ರಿಲ್ 2 ರಿಂದ ಜಾರಿಗೆ ಬರುವಂತೆ ಈಗಾಗಲೇ ಚಿಕಿತ್ಸೆಯಲ್ಲಿರುವ ಮತ್ತು ತನ್ನ ಹಳೆಯರೋಗಿಗಳ ಅನುಕೂಲಕ್ಕಾಗಿ, ಟೆಲಿಮೆಡಿಸಿನ್ ಮೂಲಕ ಸಮಾಲೋಚನೆಯನ್ನು ಪರಿಚಯಿಸಲಿದೆ ಎಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ ಹೇಳಿದ್ದಾರೆ. ಕರೋನಾ ವೈರಸ್ (ಕೋವಿಡ್ – 19) ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಹಲವು ನಿರ್ಬಂಧಗಳಿರುವುದರಿಂದ, ನಮ್ಮ ಹೆಚ್ಚಿನ ರೋಗಿಗಳು ವೈದ್ಯರೊಂದಿಗೆ ಸಮಯೋಚಿತ ಸಮಾಲೋಚನೆ ಮತ್ತು ಮರು ಸಮಾಲೋಚನೆಯಿಂದ ವಂಚಿತರಾಗಿದ್ದಾರೆ. ಈ ಸಂಗತಿಯನ್ನು ಅರಿತುಕೊಂಡು, ನಮ್ಮ ರೋಗಿಗಳಿಗೆ ಸಮಾಲೋಚನೆ ಮತ್ತು […]