ಜ.26 ರಂದು ಮಣಿಪಾಲ್ ಇನ್ ಹೊಟೇಲಿನಲ್ಲಿ ಬೃಹತ್ ರಕ್ತದಾನ ಶಿಬಿರ
ಉಡುಪಿ: ಗಣರಾಜ್ಯೋತ್ಸವ ಹಾಗೂ ಮಣಿಪಾಲ್ ಇನ್ ಹೋಟೇಲಿನ 3 ನೇ ವಾರ್ಷಿಕೋತ್ಸವದ ಪ್ರಯುಕ್ತ ಜ.26 ರಂದು ಮಣಿಪಾಲ್ ಇನ್ ಹೋಟೇಲಿನ 7 ನೇ ಮಹಡಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಡಳಿತ ನಿರ್ದೇಶಕ ಮೌಲಾನಾ ಇಬ್ರಾಹಿಂ ಗಂಗೊಳ್ಳಿ ಹೇಳಿದರು. ಅವರು ಇಂದು ಹೊಟೇಲಿನಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಉದುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ಮತ್ತು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಬೆಳಿಗ್ಗೆ 7.30 ರಿಂದ 11.30 ರವರೆಗೆ ರಕ್ತದಾನ ಶಿಬಿರ […]