ಮಣಿಪಾಲ: ಕೆಎಂಸಿ ಆಸ್ಪತ್ರೆಯಲ್ಲಿ ಅಂತರಾಷ್ಟೀಯ ಬಾಲ್ಯ ಕ್ಯಾನ್ಸರ್ ದಿನ ಆಚರಣೆ

ಮಣಿಪಾಲ: ಅಂತರಾಷ್ಟೀಯ ಬಾಲ್ಯ ಕ್ಯಾನ್ಸರ್ ದಿನವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ಕ್ಯಾನ್ಸರ್ ಮತ್ತು ರಕ್ತಶಾಸ್ತ್ರ ವಿಭಾಗವು ಇಂದು ಆಚರಿಸಿತು. ಕೆಎಂಸಿ ಡೀನ್ ಡಾ. ಶರತ್ ಕೆ ರಾವ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಜಂಟಿಯಾಗಿ ಕ್ಯಾನ್ಸರ್ ನಿಂದ ಮುಕ್ತರಾದ ಮಕ್ಕಳೊಂದಿಗೆ ಸೇರಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಶರತ್ ರಾವ್ ಅವರು, ಪ್ರತೀ ವರ್ಷ ಜಗತ್ತಿನಾದ್ಯಂತ ಸುಮಾರು ಮೂರು ಲಕ್ಷ ಮಕ್ಕಳು ಹೊಸದಾಗಿ ಕ್ಯಾನ್ಸರ್ ಗೆ ತುತ್ತಾಗುತ್ತಾರೆ. ಭಾರತದಲ್ಲಿ ಇದರ […]